Connect with us
Loading...
Loading...

ರಾಜಕೀಯ

ಅತ್ಯಾಚಾರಿಗಳ ವಿರುದ್ಧ ಸಿಡಿದೆದ್ದ ಸ್ಮೃತಿ ಇರಾನಿ; ರಾಜ್ಯಸಭೆಯಲ್ಲಿ ಹೇಳಿದ್ದೇನು ಗೊತ್ತಾ.?

Published

on

  •  
  •  
  •  
  •  
  •  
  •  
  •  
  •  

ಅತ್ಯಾಚಾರ, ಲೈಂಗಿಕ ಕಿರುಕುಳದಂಥ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿದ್ದರೂ ದೇಶದಲ್ಲಿ ಅಪರಾಧಿಗಳಿಗೆ ಶಿಕ್ಷೆ ಆಗುತ್ತಿಲ್ಲ, ಒಂದು ವೇಳೆ ಶಿಕ್ಷೆಯಾದರೂ ಪರಿಣಾಮಕಾರಿಯಾಗಿ ಆಗಿರಲ್ಲ ಅನ್ನೋ ಮಾತುಗಳು ಆಗಾಗ ಕೇಳಿ ಬರುತ್ತಲೇ ಇರುತ್ತದೆ. ಅದರಲ್ಲೂ ಆರೋಪಿಗಳ ವಿರುದ್ಧ ನ್ಯಾಯಾಲಯದಲ್ಲಿ ಹೊರಾಟ ಮಾಡಿ ಗೆಲ್ಲಬೇಕು ಅಂದ್ರೆ ಭಾರತದಂಥ ದೇಶದಲ್ಲಿ ತುಂಬಾ ಸಮಯ ಬೇಕಾಗುತ್ತದೆ ಎಂದುಕೊಂಡಿದ್ದೆವೆ.

ಅಪ್ರಾಪ್ತ ವಯಸ್ಕರ ಮೇಲೆ ಲೈಂಗಿಕ ಅಪರಾಧಗಳಲ್ಲಿ ಭಾಗಿಯಾಗಿರುವವರಿಗೆ ಮರಣದಂಡನೆ ಸೇರಿದಂತೆ ಕಠಿಣ ಶಿಕ್ಷೆ ವಿಧಿಸುವ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆಯ ತಿದ್ದುಪಡಿ ಮಸೂದೆ 2019 ಅನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಸ್ಮೃತಿ ಇರಾನಿ ಅವರು ರಾಜ್ಯಸಭೆಯಲ್ಲಿ ಮಂಡಿಸಿದರು.

ಬಳಿಕ ಮಾತನಾಡಿದ ಇರಾನಿ, ಲೈಂಗಿಕತೆಯ ದೃಶ್ಯ ಚಿತ್ರಣವನ್ನು ತೋರಿಸುವುದು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಎಂದು ಮಸೂದೆ ಪರಿಗಣಿಸುತ್ತದೆ ಎಂದರು. ಇದು ಮಕ್ಕಳ ಮೇಲೆ ಅತ್ಯಾಚಾರ ಎಸಗುವವರಿಗೆ ಮರಣದಂಡನೆ ವಿಧಿಸಲು ಸಹ ಅವಕಾಶ ನೀಡುತ್ತದೆ ಎಂದು ಅವರು ರಾಜ್ಯಸಭೆಗೆ ತಿಳಿಸಿದರು.

ಮಕ್ಕಳ ಅತ್ಯಾಚಾರಿಗಳಿಗೆ ಮರಣದಂಡನೆ ವಿಧಿಸುವ ಮಸೂದೆಯನ್ನು ನೆನ್ನೆ ರಾಜ್ಯಸಭೆಯಲ್ಲಿ ಮಂಡಿಸಲಾಗಿದ್ದು, ಈ ಮಸೂದೆಯ ಪ್ರಕಾರ ಮಕ್ಕಳನ್ನು ಅಶ್ಲೀಲ ಉದ್ದೇಶಗಳಿಗಾಗಿ ಬಳಸಿದರೆ ಅವರಿಗೆ ಜೀವಾವಧಿ ಶಿಕ್ಷೆ ಸೇರಿದಂತೆ ಕಠಿಣ ಶಿಕ್ಷೆಯನ್ನು ನೀಡಲಾಗುತ್ತೆ.

ಬಲವಾದ ದಂಡ ವಿಧಿಸುವಿಕೆಯಿಂದಾಗಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ಅಪರಾಧಗಳಿಗೆ ತಡೆಯೊಡ್ಡುವ ಉದ್ದೇಶದಿಂದ ಈ ಕಾನೂನು ರೂಪಿಸಲಾಗಿದೆ ಎಂದು ಅವರು ಹೇಳಿದರು. ಮಸೂದೆಯನ್ನು ಈಗಾಗಲೇ ಲೋಕಸಭೆ ಅಂಗೀಕರಿಸಿದೆ. ರಾಜ್ಯಸಭೆಯಲ್ಲಿ ಮಸೂದೆ ಕುರಿತು ಚರ್ಚೆ ನಡೆಯಲಿದೆ.

ಈ ಹಿಂದೆ 12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಮೇಲೆ ನಡೆಯುತ್ತಿದ್ದ ತೀವ್ರ ಸ್ವರೂಪದ ಅತ್ಯಾಚಾರಕ್ಕೆ ಮಾತ್ರ ಮರಣದಂಡನೆ ವಿಧಿಸಲಾಗುತ್ತಿತ್ತು. ಆದರೀಗ, ಪೋಕ್ಸೋ ಕಾಯ್ದೆಯಡಿ ಬರುವ ಲೈಂಗಿಕ ದೌರ್ಜನ್ಯ ಸೇರಿದಂತೆ ಇತ್ಯಾದಿ ಅಪರಾಧಗಳಿಗೂ ಗಲ್ಲು ಶಿಕ್ಷೆಯನ್ನು ಗರಿಷ್ಠ ಶಿಕ್ಷೆಯಾಗಿ ವಿಧಿಸಲು ಉದ್ದೇಶಿಸಲಾಗಿದೆ.

ಮಕ್ಕಳ ಮೇಲಿನ ದೌರ್ಜನ್ಯ ಮತ್ತು ಶಿಕ್ಷೆಯ ಅಂಕಿ ಅಂಶಗಳ ಬಗ್ಗೆ ಸ್ಪಷ್ಟತೆಯನ್ನು ಸ್ಥಾಪಿಸುವ ಉದ್ದೇಶವನ್ನು ಈ ತಿದ್ದುಪಡಿ ತರಲಾಗಿದೆ ಎಂದು ಕೇಂದ್ರದ ಮೋದಿ ಸರ್ಕಾರ ಸ್ಪಷ್ಟಪಡಿಸಿದೆ. ಒಟ್ಟಿನಲ್ಲಿ ಹೇಳುವುದಾದರೇ ಮೋದಿ ಸರಕಾರ ಹೆಣ್ಣು ಮಕ್ಕಳ ರಕ್ಷಣೆಗೆ ಸಂಪೂರ್ಣ ಜವಾಬ್ದಾರಿಯನ್ನು ತೆಗೆದುಕೊಂಡು ಕಾಮುಕರಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎನ್ನಲಾಗ್ತಿದೆ.

-Team Republic Kannada

  •  
  •  
  •  
  •  
  •  
  •  
  •  
  •  

Comments

comments

Continue Reading
Advertisement
Loading...

Latest Articles

Advertisement
Loading...

Copyright © 2017 nationalistviews.com